ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಜಿಲ್ಲೆಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ವರ್ಗ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ತರಗತಿಗಳಲ್ಲಿ ವ್ಯಾಸಂಗ ಮಾಡಿರುವ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಅಥವಾ ಯಾವುದೇ ಶಾಲೆಯ ವಿದ್ಯಾರ್ಥಿಗಳು ಮತ್ತು ಈ ಹಿಂದೆ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಅಂಕಗಳು ಮತ್ತು ಮೀಸಲಾತಿ ಆಧಾರದ ಮೇಲೆ ಅರ್ಹತಾ ಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುನಿರಾಜು ಮೊ.8904089006, ಹನೂರಿನ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಎಸ್. ಯೋಗೇಶ ಮೊ.8660188201, ಯಡವನಹಳ್ಳಿಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ರಾಜೇಶ ಮೊ.9845616320 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net