ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: 2025-26ನೇ ಶೈಕ್ಷಣಿಕ ಸಾಲಿಗೆ ವಸತಿ ಕಾಲೇಜುಗಳ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ಮೇ 20 ಕಡೆಯ ದಿನವಾಗಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ವಸತಿ ಶಾಲೆ, ಕಾಲೇಜುಗಳ ಪ್ರಥಮ ಪಿಯುಸಿ ದಾಖಲಾತಿ ಸಂಬಂಧ ಪ್ರವೇಶಾತಿ ಪ್ರಕ್ರಿಯೆಯನ್ನು ಹಾಲಿ ಚಾಲ್ತಿಯಲ್ಲಿರುವ ಮೀಸಲಾತಿಯನ್ವಯ ಪರಿಶೀಲಿಸಿ ನಿಯಮಾನುಸಾರ ಕ್ರಮವಹಿಸುವಂತೆ ಇಲಾಖೆ ಅನುಮೋದನೆ ನೀಡಿದೆ.

ಅದರಂತೆ ವಸತಿ ಕಾಲೇಜುಗಳಲ್ಲಿ ಲಭ್ಯವಿರುವ ಶೇ.100ರಷ್ಟು ಸ್ಥಾನಗಳಲ್ಲಿ ಆಯಾ ಜಿಲ್ಲೆ ಸ್ಥಳೀಯ ಅಭ್ಯರ್ಥಿಗಳಿಗೆ ವರ್ಗವಾರು ಶೇ.75ರಷ್ಟು ಹಾಗೂ ಇತರೆ ಜಿಲ್ಲೆಗಳ ಅಭ್ಯರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ವರ್ಗಾವಾರು ಮೀಸಲಿಟ್ಟು ಸೀಟು ಹಂಚಿಕೆ ಮಾಡಲು ಹಾಗೂ 2025-26ನೇ ಶೈಕ್ಷಣಿಕ ಸಾಲಿಗೆ ಶೇ.50ರಷ್ಟು ಸ್ಥಾನಗಳನ್ನು ಕೆ.ಆರ್.ಇ.ಐ.ಎಸ್ ವಿದ್ಯಾರ್ಥಿಗಳಿಗೆ ಮೀಸಲಿರಿಸಲು ಹಾಗೂ ಉಳಿದ ಶೇ.50ರಷ್ಟು ಸ್ಥಾನಗಳನ್ನು ಕೆ.ಆರ್.ಇ.ಐ.ಎಸ್ ವಸತಿ ಶಾಲೆಗಳು, ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳನ್ನು ಒಟ್ಟಾರೆಯಾಗಿ ಪರಿಗಣಿಸಿ, ಪ್ರವೇಶಾವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಜಿಲ್ಲಾ ಸಮಾನ್ವಾಧಿಕಾರಿ ಎಸ್. ಯೋಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net