

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಮತ್ತು ಬೊಮ್ಮನಕಟ್ಟೆ ಮುರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2025-26ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ(ಪಿಸಿಎಂಬಿ/ಪಿಸಿಎಂಸಿಎಸ್) ಪ್ರವೇಶಕ್ಕೆ ಆಯಾ ಕಾಲೇಜಿನಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮೇ 5 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಮೇ 15 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಸಂಬಂಧಿಸಿದ ವಸತಿ ಕಾಲೇಜುಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
----