ಪ್ರಥಮ ಸ್ಥಾನ ಉಳಿಸಿಕೊಳ್ಳಲು ಬೇಕಿದೆ ಶ್ರಮ

H.M.W.S photo-1--04
Published on

ಚಿತ್ರದುರ್ಗ:ಗುಣಾತ್ಮಕ ಶಿಕ್ಷಣದೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಪಡೆಯ ಬೇಕೆಂದು ಡಯಟ್ ಪ್ರಾಚಾ ರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಸೋಮವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, 2022-23 ನೇ ಸಾಲಿನಲ್ಲಿ ನಮ್ಮ ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಈ ವರ್ಷವೂ ಈ ಸ್ಥಾನವನ್ನು ಉಳಿಸಿಕೊಳ್ಳಲು ಶಿಕ್ಷಕರು ಶ್ರಮಿಸ ಬೇಕಿದೆ ಎಂದ ರು.
ನೋಡಲ್‌ಅಧಿಕಾರಿ ಎಸ್.ಸಿ.ಪ್ರಸಾದ್, ಹಿರಿಯ ಉಪನ್ಯಾಸಕರಾದ ಎಸ್.ಜ್ಞಾನೇಶ್ವರ, ಉಪನ್ಯಾಸಕರಾದ ಯು. ಸಿದ್ದೇಶಿ, ಕೆ.ಜಿ.ಪ್ರ ಶಾಂತ್, ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ತಾಂತ್ರಿಕ ಸಹಾಯಕ ಕೆ.ಆರ್.ಲೋಕೇಶ್, ಜಿಲ್ಲಾ,ತಾಲೂಕು ಮುಖ್ಯಶಿಕ್ಷಕರ ಸಂಘದ ಪ ದಾಧಿಕಾರಿಗಳಾದ ಸಿ.ರಂಗನಾಯ್ಕ, ಶಾಂತಪ್ಪ, ನಾಗ್ಯನಾಯ್ಕ, ಸಂಪನ್ಮೂಲ ವ್ಯಕ್ತಿಗಳಾದ ತಿಮ್ಮರಾಜು, ಜ್ಯೋತಿ, ಅನಿಲ್‌ಕುಮಾರ್ ಇತ ರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net