ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Adarsha Shakshaka Prashasti Application
Published on

ಬೆಳಗಾವಿ: 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡುವ ಯೋಜನೆ ಜಾರಿಯಲ್ಲಿದೆ. ಹನಿ ನೀರಾವರಿ ಅಳವಡಿಕೆಯಿಂದ ರೈತರು ಕಡಿಮೆ ನೀರಿನಲ್ಲಿ ಹೆಚ್ಚಿನ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಯನ್ನು ಬೆಳೆಯಬಹುದಾಗಿದೆ. ಎಲ್ಲಾ ವರ್ಗದ ರೈತರಿಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್‌ವರೆಗೆ, ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹರಿದ್ದು, ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಅಡಿಕೆ, ರಬ್ಬರ್, ಕಾಫಿ ಮತ್ತು ಟೀ ಹೊರತುಪಡಿಸಿ) ಮೊದಲು 2 ಹೆಕ್ಟೇರ್ ಪ್ರದೇಶದವರೆಗೆ ಶೇ. 75 ರಷ್ಟು ಹಾಗೂ ಉಳಿದ 3 ಹೆಕ್ಟೇರ್‌ವರೆಗೆ ಶೇ.45 ರಷ್ಟು ಸಹಾಯಧನ ಸೌಲಭ್ಯವಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಮೊದಲು 2 ಹೆಕ್ಟೇರ್ ಪ್ರದೇಶಕ್ಕೆ ಶೇ. 90 ರಷ್ಟು ಹಾಗೂ ಉಳಿದ 3 ಹೆಕ್ಟೇರ್‌ವರೆಗೆ ಶೇ. 45 ರಷ್ಟು ಸಹಾಯಧನ ಸೌಲಭ್ಯವಿರುತ್ತದೆ. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಪೂರ್ವ ತಾಲ್ಲೂಕು ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೋಂದಾಯಿಸಿ ಕಾರ್ಯಾದೇಶ ಪಡೆಯಬಹುದು. ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ/ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳ ದೂ.ಸಂ. ಬೆಳಗಾವಿ:0831-2431559, ಗೋಕಾಕ:08332-229382, ಖಾನಾಪೂರ:08336-223387, ಸವದತ್ತಿ:08330-222082, ಅಥಣಿ:08289-285099, ರಾಮದುರ್ಗ:08335-241512, ರಾಯಬಾಗ:08331-225049, ಹುಕ್ಕೇರಿ: 08333-265915, ಚಿಕ್ಕೋಡಿ:08338-274943, ಬೈಲಹೊಂಗಲ:08288-233758 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಮಾಹಾಂತೇಶ ಮುರಗೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net