

ಆಲೂರು: ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಉತ್ತಮ ಆರೋಗ್ಯ ಕೊಡಲಿ ಎಂದು ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಆಲೂರು ಕಟ್ಟಾಯ ಮಂಡಲದ ಅಧ್ಯಕ್ಷ ಹುಲ್ಲಹಳ್ಳಿ ನಾಗರಾಜ್ ತಿಳಿಸಿದರು.
ಪಟ್ಟಣದ ಕೆಇಬಿ ವೃತ್ತದಲ್ಲಿರುವ ಸಂಗಮೇಶ್ವರ ದೇವಸ್ಥಾನದಲ್ಲಿ ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಜನ್ಮದಿನ ಆಚರಿಸಿ ಮಾತನಾಡಿದರು.
ಭಾರತ ದೇಶ ಅಖಂಡತೆಯಲ್ಲಿ ಏಕತೆ ಹೊಂದಿದ ಶ್ರೀಮಂತ ರಾಷ್ಟ್ರ. ಇಂತಹ ಬಲಿಷ್ಠ ದೇಶವನ್ನು ತಮ್ಮದೆ ಆದ ತತ್ವ-ಸಿದ್ಧಾಂತಗಳ ಮೇಲೆ ರಾಜಕೀಯ ಚಾಣಕ್ಯರಾಗಿ ಸರ್ಕಾರದ ಪ್ರತಿಯೊಂದು ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂಬ ಮಹದಾಸೆಯನ್ನು ಇಟ್ಟು ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ದುಡಿಯುತ್ತಿದ್ದಾರೆ ಎಂದರು.
ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ನಾಗರಾಜ್ ಕ್ಯಾಂಟೀನ್, ಮುಖಂಡರಾದ ಲೋಹಿತ್, ಸಂದೇಶ್ ಹಳೇ ಆಲೂರು, ಧ್ರುವ ಮತ್ತಿತರರು ಹಾಜರಿದ್ದರು.