

ಸುಂಟಿಕೊಪ್ಪ : ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ಬಿಜೆಪಿ ಘಟಕದಿಂದ ಮಾದಾಪುರ ರಸ್ತೆಯ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಪ್ರಧಾನಿ ಮೋದಿ ದೇಶದ ಚುಕ್ಕಾಣಿ ಹಿಡಿದ ನಂತರ ಪ್ರಪಂಚಕ್ಕೆ ಭಾರತದ ಮಹತ್ವ ಹೆಚ್ಚಾಗಿ ಅರ್ಥವಾಯಿತು ಎಂದರು. ಪೂಜಾ ಕಾರ್ಯದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ವಾಸುದೇವ್, ಜಿಲ್ಲಾ ಒಬಿಸಿ ಘಟಕ ಉಪಾಧ್ಯಕ್ಷ ಬಿ.ಕೆ. ಮೋಹನ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ಮುಖಂಡರಾದ ಧನು ಕಾವೇರಪ್ಪ, ಸಿ.ಸಿ.ಸುನಿಲ್, ಶಿವು ಇದ್ದರು. ನಂತರ ಸ್ವಸ್ಥ ವಿಶೇಷ ಚೇತನರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸ ಲಾಯಿತು.