ಪ್ರಧಾನಿ ಮೋದಿಯಿಂದ ಭಾರತಕ್ಕೆ ವಿಶ್ವವಿಖ್ಯಾತಿ ಪಟ್ಟ

SEP., 17, HNP., PH.1.
Published on

ಹೊಳೆನರಸೀಪುರ: ಭಾರತವನ್ನು ವಿಶ್ವಖ್ಯಾತಿಗೊಳಿಸಿದ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಎಂದು ಉದ್ಯಮಿ ಮಾಯಣ್ಣಗೌಡ ತಿಳಿಸಿದರು.

ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಗುರುವಾರ ಬಿಜೆಪಿ ತಾಲೂಕು ಘಟಕ ಹಾಗೂ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರಧಾನಿ ಮೋದಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಡುವಲಹಿಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಹಾಗೂ ಕಾಲೇಜುಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೆ ಸ್ಥಳಾವಕಾಶವಿದ್ದ ಕಡೆಗಳಲ್ಲಿ ಗಿಡಗಳನ್ನು ನೆಡಲಾಗಿದೆ. ಸೆ.20ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರ ಆಡಳಿತ ಹಾಗೂ ಬಿಜೆಪಿಯ ತತ್ವ ಸಿದ್ಧಾಂತವನ್ನು ಜನರಿಗೆ ತಿಳಿಸಲಿದ್ದೇವೆ ಎಂದರು.

ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಆರ್.ನಾರಾಯಣ ಮಾತನಾಡಿ, ಮೋದಿ ಅವರ ಜನ್ಮದಿನವನ್ನು ಆರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಿದ್ದೇವೆ ಎಂದರು.
ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಂತರ ಸರ್ಕಾರಿ ಆಸ್ಪತ್ರೆ ರೋಗಿಗಳು ಹಾಗೂ ಕರೊನಾ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಳಲಿ ನಾರಾಯಣ, ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಡಿ.ಆರ್. ಶಿವಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಮೋಹನ, ಮುಖಂಡರಾದ ಗಂಗಾಧರಚಾರ್, ಪ್ರಸನ್ನ, ಎಂ.ಎನ್.ರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net