ಪ್ರಧಾನಿ ಮೋದಿಯಿಂದ ಸ್ತ್ರೀ ಶಕ್ತಿಗೆ ಹೊಸ ಹುರುಪು

28bdvt4
ಭದ್ರಾವತಿ ಕೂಡ್ಲಿಗೆರೆ ಮಹಾಶಕ್ತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸೇವಾ ಪಾಕ್ಷಿಕ್‌ಗೆ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಜಿ.ಧರ್ಮಪ್ರಸಾದ್, ಟಿ.ಡಿ.ಮೇಘರಾಜ್, ರುದ್ರೇಗೌಡ ಇತರರಿದ್ದರು.
Published on

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಭಿವೃದ್ದಿಯತ್ತ ಕೊಂಡೊಯ್ಯಲು ಸಹಕಾರಿಯಾಗಿದ್ದಾರೆ. ಎಲ್ಲಾ ಕ್ಷೇತ್ರಗಳು ಮತ್ತಷ್ಟು ಅಭಿವೃದ್ಧಿ ಕಾಣಲು ಮೋದಿ ಅವರಿಂದ ಮಾತ್ರ ಸಾಧ್ಯ. ಮುಂದಿನ ಚುನಾವಣೆ ದೇಶದ ಚುನಾವಣೆ ಎಂಬ ಗುರಿಯೊಂದಿಗೆ ನಾವೆಲ್ಲರೂ ಸಿದ್ಧರಾಗಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತಾಲೂಕಿನ ಹಿರಿಯೂರು ಕೂಡ್ಲಿಗೆರೆ ಮಹಾಶಕ್ತಿ ಕೇಂದ್ರದಿಂದ ಆಯೋಜಿಸಿದ್ದ ಸೇವಾ ಪಾಕ್ಷಿಕ ಹಾಗೂ ಬೂತ್ ಸಶಕ್ತೀಕರಣಕ್ಕೆ ಚಾಲನೆ ನೀಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಿರುವುದು ಶ್ಲಾಘನೀಯ. ಶಿವಮೊಗ್ಗ ವಿಮಾನ ನಿಲ್ದಾಣ, ಭದ್ರಾವತಿ ಆಕಾಶವಾಣಿ ಉನ್ನತೀಕರಣ, ಶಿವಮೊಗ್ಗ-ರಾಣೆಬೆನ್ನೂರು ಹೊಸ ರೈಲು ಸಂಪರ್ಕ, ಹತ್ತು ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾ.ಹೆ. ಅಭಿವೃದ್ಧಿ ಸೇರಿದಂತೆ ಮೋದಿ ಅವರು ಅನುಷ್ಠಾನಗೊಳಿಸಿದ ಎಲ್ಲ ಯೋಜನೆಗಳು ಜನಸಾಮಾನ್ಯರಿಗೆ ಸಾಕಷ್ಟು ಅನುಕೂಲವನ್ನುಂಟು ಮಾಡಿವೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಂಎಲ್‌ಸಿ ರುದ್ರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಪ್ರಮುಖರಾದ ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಪದ್ಮನಾರಾಯಣ್, ಸುರೇಶಪ್ಪ, ಚನ್ನೇಶ್, ಅವಿನಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net