ಪ್ರಧಾನಿಯವರೇ ಅಕ್ಕಿ ವಿತರಿಸಿ

CTD 05 Protest-05
Published on

ಚಿತ್ರದುರ್ಗ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ವಿತರಿಸದೆಯೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಜಿಪಂನ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಹೊರ ಭಾಗದಲ್ಲೇ ತಡೆದರು. ಎ.ನಾರಾಯಣಸ್ವಾಮಿ ಅವರು ಅಕ್ಕಿ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆ ಧಿಕ್ಕರಿಸಿ ಅಕ್ಕಿ ನೀಡಲು ನಿರಾಕರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ತರಲು ಕಾಂಗ್ರೆಸ್ಸಿಗರು ಪ್ರಯತ್ನಿಸುತ್ತಿದ್ದರೆ, ಹತ್ತಿಕ್ಕುವ ಕುತಂತ್ರ ಬಿಜೆಪಿ ಮಾಡುತ್ತಿದ್ದು, ಪ್ರಧಾನಿ ಅವರೇ ಅಕ್ಕಿ ವಿತರಿಸಿ ಎಂದು ಕೋರಿದರು.
ಮುಖಂಡರಾದ ವಾಸೀಮ್, ಯೂಸೆಫ್, ಸಾದಿಕ್, ಪಂಡಿತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net