

ಚಿತ್ರದುರ್ಗ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಬೆಂಗಳೂರು ಪರಿಸರ ಸಂಘ ಜೂನ್ 8ರಂದು ಹಮ್ಮಿಕೊಂಡಿರುವ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆ ಪರಿಣಾಮಗಳ ಕುರಿತಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಆಸಕ್ತರು ಮೇ 27ರೊಳಗೆ ಪ್ರಬಂಧಗಳನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರೊ.ಯು.ಆರ್.ರಾವ್, ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು-560097. ಈ ವಿಳಾಸಕ್ಕೆ ಕಳಿಸಬೇಕು.