

ಮಡಿಕೇರಿ: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್‌ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್. ಪೊನ್ನಣ್ಣ ಜಯ ಗಳಿಸಿದ್ದಾರೆ.
ಗೆಲುವು ಸಾಧಿಸಿದ ಡಾ.ಮಂಥರ್‌ಗೌಡ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾ ಪ್ರಮಾಣ ಪತ್ರ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಸೀಲ್ದಾರ್ ರವಿಶಂಕರ್ ಇತರರು ಇದ್ದರು.