ಪ್ರಮಾಣಪತ್ರ ನೀಡಲು ಆದೇಶಿಸಿ

11Jaggu3
ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರಿಂದ ಮತ್ತೊಮ್ಮೆ ಅಧಿಕೃತ ಆದೇಶ ಹೊರಡಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
Published on

ಬೆಳಗಾವಿ: ಸಂವಿಧಾನ ಬದ್ಧ ಹಕ್ಕಿಗಾಗಿ ಹೋರಾಟ ಮಾಡುವವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ. ಬೇಡ- ಜಂಗಮ ಜಾತಿ ಪ್ರಮಾಣ ಪತ್ರವನ್ನು ನೀಡಲು ಮತ್ತೊಮ್ಮೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಬದ್ಧ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಮುಖಂಡರ ಮೇಲೆ ಸರ್ಕಾರ ಹಾಗೂ ಅಧಿಕಾರಿಗಳು ಜಾತಿ ನಿಂದನೆ ಪ್ರಕರಣ ದಾಖಲಿಸುವ ಮೂಲಕ ಹೋರಾಟ ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಸರ್ಕಾರ, ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ, ಸುತ್ತೋಲೆಗಳಲ್ಲಿಯೂ ಜಾತಿ ಪ್ರಮಾಣ ಪತ್ರ ನೀಡುವಂತೆ ತಿಳಿಸಿದ್ದರೂ ಅಧಿಕಾರಿಗಳು ಹಾಗೂ ಕೆಲವು ರಾಜಕಾರಣಿಗಳು ಬೇಡ ಜಂಗಮರ ಸಂವಿಧಾನ ಬದ್ಧ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದರು. ಈವರೆಗೂ ಈಡೇರಿಸಿಲ್ಲ. ಮುಂದಿನ ದಿನಗಳಲ್ಲಿ ಬಿ.ಡಿ.ಹಿರೇಮಠರಿಗೆ ಏನಾದರೂ ಅನ್ಯಾಯ ಆದರೆ ಸರ್ಕಾರದ ವಿರುದ್ಧ ಸಮಾಜ ನಿರ್ಣಯ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು. ಮಹಾಂತೇಶ ರಣಗಟ್ಟಿಮಠ, ಮುರಗಯ್ಯ ಚರಲಿಂಗಮಠ, ಶಶಿಧರ ಸ್ವಾಮಿ ಕಲ್ಮಠ, ಎ.ಆರ್.ಚಿಕ್ಕಮಠ, ನಾಗಯ್ಯ ಕಲ್ಮಠ, ರವಿ ಶಾಸ್ತ್ರಿ, ಸೋಮು ಹಿರೇಮಠ, ಮುರುಘೇಂದ್ರ ಶಾಸ್ತ್ರಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net