ಪ್ರಮುಖ ಕೊಲೆ ಆರೋಪಿಗಳ ಬಂಧನವಾಗಲಿ

Oplus_131072
Oplus_131072
Published on

ನಂಜನಗೂಡು: ತಾಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯಾ ಅವರ ಪತಿ ನಂಜುಂಡಸ್ವಾಮಿ ಅವರ ಕೊಲೆ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇನ್ನುಳಿದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಉಪ್ಪಾರ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರು ನಗರದ ತಾಲೂಕು ಆಡಳಿತ ಭವನ ಮುಂಭಾಗ ಮಂಗಳವಾರ ಧರಣಿ ನಡೆಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಸಂಬಂಧಿಸಿಂತೆ ತಿಂಗಳ ಹಿಂದೆ ಗ್ರಾಪಂ ಸದಸ್ಯೆ ಸೌಭಾಗ್ಯಾ ಅವರ ಪತಿ ನಂಜುಂಡಸ್ವಾಮಿ ಅವರನ್ನು ಅಧಿಕಾರದ ದುರಾಸೆಗೆ ಕೊಲೆ ಪೂರ್ವ ನಿಯೋಜಿತದಂತೆ ಕೊಲೆ ಮಾಡಲಾಗಿತ್ತು. ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಬಾಲಚಂದ್ರ ಮತ್ತು ಗೋಳೂರು ಮಂಜು ಅವರನ್ನೂ ಶೀಘ್ರ ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷೆಯಾಗಿದ್ದ ಸುಮತಿ ಅವರು ರಾಜೀನಾಮೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರ ಮೃತ ನಂಜುಂಡಸ್ವಾಮಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ಸೌಭಾಗ್ಯಾರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಿ ಕೊಡಬೇಕು. ಇನ್ನುಳಿದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು ಮತ್ತು ಡಿವೈಎಸ್‌ಪಿ ರಘು ಅವರಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನಾನಿರತರು, ಪ್ರಮುಖ ಆರೋಪಿಗಳನ್ನು ಬಂಧಿಸುವಂತೆ ಗಡುವು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net