

ಕುಶಾಲನಗರ : ಕುಶಾಲನಗರ 4ನೇ ಬ್ಲಾಕ್‌ನ ಅಂಬೇಡ್ಕರ್ ಟ್ರಸ್ಟ್ ವತಿಯಿಂದ ಕುಶಾಲನಗರ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಅವರನ್ನು ಭಾನುವಾರ ಗೌರವಿಸಲಾಯಿತು. ಪ್ರವಾಸಿ ಮಂದಿರದ ಆವರಣದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಪ್ರಮೋದ್ ಅವರನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಟ್ರಸ್ಟ್ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಕೊಡಗಿನ ಎರಡು ಕ್ಷೇತ್ರ ಕಾಂಗ್ರೆಸ್‌ಗೆ ಲಭ್ಯವಾಗಿದೆ. ಮಡಿಕೇರಿ ಕ್ಷೇತ್ರದಲ್ಲಿ ಅಭ್ಯರ್ಥಿ ಗೆಲುವಿಗೆ ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ ಅವರ ಶ್ರಮ ಕೂಡ ಹೆಚ್ಚಿನ ಮಟ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಅವರ ಸಂಘಟನಾ ಕಾರ್ಯ ಶ್ಲಾಘನೀಯ ಎಂದರು.
ಟ್ರಸ್ಟ್ ಖಜಾಂಚಿ ಲೋಕೇಶ್, ಕಾರ್ಯದರ್ಶಿ ಸತೀಶ್, ಪ್ರಮುಖರಾದ ಪ್ರಭು, ಶಾಂತಕುಮಾರ್, ಆನಂದ್ ಮತ್ತಿತರರು ಇದ್ದರು.