ಪ್ರಯಾಣಿಕರಿಗೆ ತಟ್ಟಿದ ಮಷ್ಕರದ ಬಿಸಿ

5 ckm 7
ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಮಷ್ಕರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರಯಾಣಿಕರನ್ನು ಕರೆದೊಯ್ಯಲು ನಿಂತಿರುವ ಖಾಸಗಿ ಬಸ್‌ಗಳು.
Published on

ಚಿಕ್ಕಮಗಳೂರು: ವೇತನ ಹೆಚ್ಚಳ ಹಾಗೂ ಬಾಕಿ ವೇತನ ಪಾವತಿಯ ಬೇಡಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರಕ್ಕೆ ಕರೆ ನೀಡಿ ಕರ್ತವ್ಯದಿಂದ ದೂರ ಉಳಿದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿತ್ತು.

ಜಿಲ್ಲೆಯ ಚಿಕ್ಕಮಗಳೂರು, ತರೀಕೆರೆ, ಕಡೂರು, ಮೂಡಿಗೆರೆ ಹಾಗೂ ಶೃಂಗೇರಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆಯಿಂದಲೇ ಸರ್ಕಾರಿ ಬಸ್‌ಗಳು ಡಿಪೋಗಳಿಂದ ನಿಲ್ದಾಣದೊಳಗೆ ಪ್ರವೇಶ ಮಾಡಲೇ ಇಲ್ಲ. ಅದ್ದರಿಂದ ಜನ ಜೀವನದ ಮೇಲೆ ಮುಷ್ಕರದ ಮೊದಲ ದಿನ ದೊಡ್ಡ ಮಟ್ಟದಲ್ಲೇ ಪರಿಣಾಮ ಬೀರಿತು.

ವೇತನ ಹೆಚ್ಚಳ, ಹಿಂಬಾಕಿ ಪಾವತಿ ಹಾಗೂ ೨೦೨೪ರ ಜನವರಿಯಿಂದ ಹೊಸದಾಗಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಮಂಗಳವಾರ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿತ್ತು. ಅದ್ದರಿಂದ ಸಂಸ್ಥೆಯ ನೌಕರರು ಕೆಲಸಕ್ಕೆ ಹಾಜರಾಗಿರಲಿಲ್ಲ. ಬೆಳಗ್ಗೆ ಯಾವುದೇ ಬಸ್ ಡಿಪೋದಿಂದ ನಿಲ್ದಾಣಕ್ಕೆ ಬರಲಿಲ್ಲ.

ಮುಷ್ಕರದಿಂದ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು ಎಂಬ ಉz್ದೆÃಶದಿಂದ ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು. ದೂರದ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಗ್ರಾಮೀಣ ಭಾಗಗಳಿಗೆ ತೆರಳಲು ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ವ್ಯವಸ್ತೆ ಮಾಡಲಾಗಿತ್ತು.

ಸರ್ಕಾರಿ ಬಸ್ ನಿಲ್ದಾಣದಿಂದಲೇ ಮಂಗಳವಾರ ಬೆಳಗ್ಗಿನಿಂದಲೇ ಖಾಸಗಿ ಬಸ್‌ಗಳು ದೂರದ ಊರುಗಳಿಗೆ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಒದಗಿಸಿದವು. ಇನ್ನು ಸಮೀಪದ ಸ್ಥಳಗಳಿಗೆ ಬಸ್ ನಿಲ್ದಾಣದ ಎದುರಿನಿಂದಲೇ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ವ್ಯವಸ್ಥೆ ಮಾಡಲಾಗಿತ್ತು. ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ಟಿಕೆಟ್ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದು ಎಂದು ಹಾಲಿ ಚಾಲ್ತಿಯಲ್ಲಿರುವ ಕೆಎಸ್‌ಆರ್‌ಟಿಸಿಯ ದರಪಟ್ಟಿಯನ್ನು ಸಾರ್ವಜನಿಕವಾಗಿ ಕಾಣುವಂತೆ ಬಸ್ ನಿಲ್ದಾಣಗಳಲ್ಲಿ ಹಾಕಲಾಗಿತ್ತು. ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದೆಂದು ಸೂಚನೆ ನೀಡಲಾಗಿತ್ತು.

ಕ್ಷೀಣಿಸಿದ ಪ್ರಯಾಣಿಕರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಂಗಳವಾರ ಎಂದಿನAತೆ ವಾತಾವರಣ ಇರಲಿಲ್ಲ. ಪ್ರಯಾಣಿಕರ ಸಂಖ್ಯೆ ತೀರ ಇಳಿಮುಖವಾಗಿತ್ತು. ಕೆಲವೇ ಮಂದಿ ಪ್ರಯಾಣಿಕರು ಕಂಡು ಬರುತ್ತಿದ್ದರು. ದೂರದ ಊರುಗಳು ಮಾತ್ರವಲ್ಲ, ಗ್ರಾಮೀಣ ಭಾಗದ ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿತ್ತು. ಪ್ರಯಾಣಿಕರಿಗೆ ತೊಂದರೆಯಾಗಬಾರದೆAದು ಗ್ರಾಮೀಣ ಭಾಗಕ್ಕೆ ಮ್ಯಾಕ್ಸಿ ಕ್ಯಾಬ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಹೆಚ್ಚಿನ ಮಾರ್ಗಗಳಲ್ಲಿ ಈ ಪರ್ಯಾಯ ವ್ಯವಸ್ಥೆಯೂ ಕೂಡ ಇರಲಿಲ್ಲ.

ಬಸ್‌ಗಳು ಇಲ್ಲದಿರುವುದರಿಂದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿತ್ತು. ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಕೆಲವು ವಿದ್ಯಾರ್ಥಿಗಳು ಶಾಲೆಗಳು ಬಂದಿದ್ದರು. ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿತ್ತು.

ಶೃಂಗೇರಿ, ಮೂಡಿಗೆರೆ ಹಾಗೂ ತರೀಕೆರೆಯಲ್ಲೂ ಇದೇ ವಾತಾವರಣ ಇತ್ತು. ಆದರೆ ಕಡೂರಿನಲ್ಲಿ ಮಧ್ಯಾಹ್ನ ೧೨ ಗಂಟೆಯ ವೇಳೆಗೆ ಪೊಲೀಸರ ಕಣ್ಗಾವಲಿನಲ್ಲಿ ಗ್ರಾಮೀಣ ಪ್ರದೇಶಕ್ಕೆ ಒಂದರ ನಂತರ ಮತ್ತೊಂದರAತೆ ಮೂರು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಿಡಲಾಗಿತ್ತು. ಸಂಸ್ಥೆಯ ನೌಕರರು ಪ್ರತಿಭಟನಾ ಮೆರವಣಿಗೆಯಾಗಲೀ, ಬಸ್ ನಿಲ್ದಾಣದೊಳಗೆ ಬಂದು ಖಾಸಗಿ ಬಸ್ ಮಾಲೀಕರ ಹಾಗೂ ನೌಕರರಿಗೆ ತಡೆಯೊಡ್ಡುವುದಾಗಲಿ ಮಾಡಲಿಲ್ಲ. ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ಸರ್ಕಾರಿ ಬಸ್ ನೌಕರರು ಮುಷ್ಕರ ನಡೆಸಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲೆಯ ಎಲ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ಖಾಸಗಿ ಬಸ್‌ಗಳನ್ನು ಬಿಡಲಾಗಿದೆ. ಬೆಳಗ್ಗೆ ೪ ಗಂಟೆಯಿAದಲೇ ಪೊಲೀಸ್ ಅಧಿಕಾರಿಗಳು ಬಸ್ ನಿಲ್ದಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಸ್ಥಳದಲ್ಲಿ ತಹಸೀಲ್ದಾರ್ ಹಾಗೂ ಗ್ರೇಡ್ - ೨ ತಹಸೀಲ್ದಾರ್ ಇರುವ ವ್ಯವಸ್ಥೆ ಮಾಡಲಾಗಿದೆ. ಒಂದೇ ಮಾರ್ಗದಲ್ಲಿ ಹೆಚ್ಚು ಮಂದಿ ಪ್ರಯಾಣಿಕರು ಕಂಡು ಬಂದರೆ ಅಂತಹ ಮಾರ್ಗಗಳಲ್ಲಿ ಬಸ್‌ಗಳನ್ನು ಬಿಡಲಾಗುತ್ತಿದೆ. ಕೆಎಸ್‌ಆರ್‌ಟಿಸಿಯಲ್ಲಿ ೭೫ ಜನ ಹೊರ ಗುತ್ತಿಗೆಯಲ್ಲಿ ನೇಮಕಗೊಂಡಿರುವ ಚಾಲಕರು ಇದ್ದಾರೆ. ತುರ್ತು ಅವಶ್ಯಕತೆ ಇದ್ದರೆ ಅವರನ್ನು ಬಳಸಿಕೊಳ್ಳಲಾಗುವುದು.

ನಾರಾಯಣರಡ್ಡಿ ಕನಕರಡ್ಡಿ, ಎಡಿಸಿ ಚಿಕ್ಕಮಗಳೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net