ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆವಹಿಸಿ

C.T.Shilpanag
Published on

ಚಾಮರಾಜನಗರ: ಜಿಲ್ಲೆಯಾದ್ಯಂತ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ಯಾವುದೇ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ಹೊರಬಿಡುವ ಸಾಧ್ಯತೆ ಇರುವುದರಿಂದ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ತಿಳಿಸಿದ್ದಾರೆ.

ರಾಜ್ಯದ ಹಲವೆಟೆ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ಕೆಆರ್‌ಎಸ್, ಕಬಿನಿ, ನುಗು ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಯಾವುದೇ ಸಮಯದಲ್ಲಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾದ ವೆಸ್ಲಿ ಸೇತುವೆ, ಹೊಗೇನೆಕಲ್ ಫಾಲ್ಸ್, ಶಿವನಸಮುದ್ರ, ಭರಚುಕ್ಕಿ ಜಲಪಾತ ಹಾಗೂ ಇನ್ನಿತರ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವ ಸಂದರ್ಭದಲ್ಲಿ ಪ್ರವಾಸಿಗರ ನಿರ್ಲಕ್ಷ್ಯದಿಂದ ಅವಘಡಗಳು ಸಂಭವಿಸಿ ಪ್ರಾಣಹಾನಿ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದರಿ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net