ಪ್ರವಾಸಿ ತಾಣಗಳಿಗೆ ಮೂಲಸೌಕರ್ಯಕ್ಕೆ ಮನವಿ

07SPT3
Published on

ಸೋಮವಾರಪೇಟೆ: ತಾಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ತಾಲೂಕು ಹೋಂಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳು ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಮಂಗಳವಾರ ಶಾಸಕರ ಕಚೇರಿಯಲ್ಲಿ ಚರ್ಚಿಸಿದರು.

ತಾಲೂಕಿನಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಮೂಲಸೌಕರ್ಯ, ರಸ್ತೆ ಸೇರಿದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್ ಮನವಿ ಮಾಡಿದರು. ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಎಸ್.ಎಲ್.ಅಭಿನಂದನ್, ಖಜಾಂಚಿ ಡಿ.ಪಿ.ಪ್ರೀತಮ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net