ಪ್ರವಾಸಿ ತಾಣವಾಗಿ ಕಂದವಾರ ಕೆರೆ

17CBP4
Published on

ಚಿಕ್ಕಬಳ್ಳಾಪುರ : ಎಚ್.ಎನ್.ವ್ಯಾಲಿ ನೀರಿನಿಂದ ಮೈದುಂಬಿರುವ ನಗರದ ಕಂದವಾರ ಕೆರೆೆಯ ಸೌಂದರ್ಯವನ್ನು ನೈಸರ್ಗಿಕವಾಗಿ ಹೆಚ್ಚಿಸಿ, ಪ್ರವಾಸಿ ತಾಣವನ್ನಾಗಿ ರೂಪಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಜಿಲ್ಲಾಡಳಿತ ಭವನದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಕೆರೆಯ ಬಳಿ ವಾಯು ವಿಹಾರ ಪಥ, ಮಕ್ಕಳಿಗೆ ಆಟದ ಮೈದಾನ, ಸಂಗೀತ ಕಾರಂಜಿ, ಕ್ಯಾಂಟೀನ್, ಶೌಚಗೃಹ ನಿರ್ಮಿಸಲಾಗುವುದು. ದೋಣಿ ವಿಹಾರದ ವ್ಯವಸ್ಥೆ ಕೈಗೊಳ್ಳುವಿಕೆ ಸೇರಿ ಅಭಿವೃದ್ಧಿಯ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದರು. ಬೆಂಗಳೂರಿನ ಹೆಬ್ಬಾಳ ಮತ್ತು ನಾಗವಾರ ವ್ಯಾಲಿ ಯೋಜನೆಯಿಂದ ಇಲ್ಲಿನ ಕಂದವಾರ ಕೆರೆಗೆ ತ್ಯಾಜ್ಯ ಸಂಸ್ಕರಿಸಿದ ನೀರು ಪೂರೈಕೆಯಾಗಿದೆ. ಇದರಿಂದ ಸುತ್ತಲಿನ ಪ್ರದೇಶದಲ್ಲಿ ಅಂತರ್ಜಲಮಟ್ಟ ಹೆಚ್ಚಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಪೌರಾಯುಕ್ತ ಲೋಹಿತ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net