

ಬಾಗಲಕೋಟೆ: ಐತಿಹಾಸಿಕ ಬಾದಾಮಿಯ ಗುಹಾಂತರ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ವಾಹನ ನಿಲುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶನಿವಾರ ಜರುಗಿದ ಕೇಂದ್ರ ಪುರಸ್ಕೃತ ಹೃದಯ ಯೋಜನೆಯ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾದಾಮಿ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಸಮಿತಿಯ ಅಽÃನದಲ್ಲಿರುವ ಒಟ್ಟು ೯.೮ ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಯಿಂದ ಖರೀದಿ ಮಾಡಿಕೊಳ್ಳಲಾಗಿದೆ. ಆ ಜಾಗದಲ್ಲಿ ಅಗತ್ಯವಿರುವ ಜಾಗವನ್ನು ಅಭಿವೃದ್ಧಿ ಪಡಿಸಿ ಪ್ರವಾಸಿಗರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಜಾಗದ ಖರೀದಿ ಪ್ರಕ್ರಿಯೆ ಮುಗಿದಿದ್ದು, ಹಂಸ್ತಾರ ಮಾತ್ರ ಬಾಕಿ ಉಳಿದಿದೆ. ಶೀಘ್ರದಲ್ಲಿ ಈ ಕಾರ್ಯ ನಡೆಯಲಿದೆ ಎಂದರು.
ಹೃದಯ ಯೋಜನೆಯಲ್ಲಿ ಕೈಗೆತ್ತಿಕೊಂಡ ಕಾಮಗಾರಿಯಲ್ಲಿ ಎರಡು ಕಾಮಗಾರಿ ಬಾಕಿ ಉಳಿದಿದ್ದು, ಈ ಕುರಿತು ಕಾಮಗಾರಿಯ ಪ್ರಸ್ತಾವನೆಯನ್ನು ತಯಾರು ಮಾಡಿ ಸರ್ಕಾರಕ್ಕೆ ಸಲ್ಲಿಸಲು ತಿಳಿಸಿದ ಅವರು ಇಚ್ಚಾಶಕ್ತಿಯಿಂದ ಕೆಲಸ ಮಾಡಿದಲ್ಲಿ ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಸಾದ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಽಕಾರಿಗಳು ಜವಾಬ್ದಾರಿಯನ್ನು ಅರಿತು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಽಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಈಗಾಗಲೇ ಹೃದಯ ಯೋಜನೆಯಡಿ ಸ್ವಾಗತ ಕಮಾನು, ಶೌಚಗೃಹ ಸಂಕೀರ್ಣ, ಸಂಚಾರಿ ಮಾಹಿತಿ ಫಲಕ ಹಾಗೂ ೨ ವರ್ತುಲ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಸ್ವಾಗತ ಕಮಾನುಗಳು ಉದುರಿ ಹೋಗುತ್ತಿವೆ. ಅಲ್ಲದೇ ಮಾಹಿತಿಯ ಸಂಚಾರಿ ಫಲಕಗಳು ಸಹ ಕಳಚಿ ಬೀಳುತ್ತಿವೆ. ೧೯೦ ಫಲಕಗಳಲ್ಲಿ ಕೆಲವೊಂದು ಫಲಕಗಳು ಕಳಚಿದ್ದು, ದುರಸ್ಥಿಗೆ ಕ್ರಮ ಕೈಗೊಳ್ಳಲು ಸೂಚಿಸಿದರು. ಹೃದಯ ಯೋಜನೆಗೆ ಬಿಡುಗಡೆಯಾದ ಅನುದಾನ ಸಂಪೂರ್ಣ ಬಳಕೆಯಾಗಿ ಬಾದಾಮಿ ಐತಿಹಾಸಿಕ ತಾಣ ಅಭಿವೃದ್ದಿಗೊಳ್ಳುವಂತಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಉಪ ವಿಭಾಗಾಽಕಾರಿ ಸಂತೋಷ ಜಗಲಾಸರ, ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಕೆ.ದುರುಗಾದಾಸ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಬಾದಾಮಿ ಪುರಸಭೆಯ ಮುಖ್ಯಾಽಕಾರಿ ಬಿ.ಎಂ.ಡಾAಗೆ, ಭಾರತೀಯ ಪುರಾತತ್ವ ಇಲಾಖೆಯ ರಮೇಶ ಮೂಲಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.