ಪ್ರವಾಸಿಗರಿಗೆ ಕಲ್ಪಿಸಬೇಕಿದೆ ಮೂಲ ಸೌಕರ್ಯ

CTD KOTE--0001
Published on

ಚಿತ್ರದುರ್ಗ: ಇತಿಹಾಸ ಪ್ರಸಿದ್ಧ ಏಳುಸುತ್ತಿನ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಜಾಸ್ತಿಯಾಗುತ್ತಿದ್ದರೂ ಅವರಿಗೆ ಇಲ್ಲಿ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಇದೆ ಎಂದು ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್. ಸತ್ಯಣ್ಣ ಹೇಳಿದರು.

ಕೋಟೆ ವಾಯುವಿಹಾರಿಗಳ ಸಂಘ, ಭಾರತೀಯ ಪುರಾತತ್ವ ಮತ್ತು ಪ್ರಾಚ್ಯವಸ್ತು ಇಲಾಖೆ, ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಎನ್‌ಎಸ್‌ಎಸ್ ಘಟಕ, ಜಿಲ್ಲಾ ಪರಿಸರ ಪ್ರೇಮಿಗಳ ಒಕ್ಕೂಟ ಕೋಟೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಗಮನ ಹರಿಸಬೇಕು. ಕೋಟೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳ ಬೇಕಿದೆ ಎಂದರು.

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಶೋಭಾ ಮಲ್ಲಿಕಾರ್ಜುನ್, ಪಪೂ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಬಿ.ಎನ್. ನಾಗರಾಜ್, ಜಿ ಲ್ಲಾ ಪರಿಸರ ಪ್ರೇಮಿಗಳ ಒಕ್ಕೂಟದ ಮಲ್ಲಿಕಾರ್ಜುನಯ್ಯ ಮಾತನಾಡಿದರು.

ಸಂಘದ ಗೌರವಾಧ್ಯಕ್ಷ ಕೂಬಾನಾಯ್ಕ, ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಕೆ. ಅಂಬೇಕರ್, ಪುರಾತತ್ವ ಇಲಾಖೆಯ ರಾಣಿ, ಇರ್ಫಾನ್, ಮಲ್ಲಿಕಾರ್ಜುನಾಚಾರ್, ಮಲ್ಲಿಕಾರ್ಜುನಸ್ವಾಮಿ, ಮುರಿಗೆಮ್ಮ, ಪ್ರೊ.ನಟರಾಜ್, ಸಂದೀಪ್, ಲೋಕೇಶ್, ಮಂಜುಳಾ, ವಸಂತ, ಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net