

ಚಿತ್ರದುರ್ಗ: ಚಿತ್ರದುರ್ಗ ಕೋಟೆ ಇತಿಹಾಸ ಪ್ರಚುರಪಡಿಸುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯವಾಗಿದೆ ಎಂದು ಎನ್‌ಎಚ್ 48ರ ತ ಹಸೀಲ್ದಾರ್ ನಾಗವೇಣಿ ಹೇಳಿದರು. ಜಿಲ್ಲಾಡಳಿತ,ಜಿಪಂ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಈಚೆಗೆ ನಗ ರದ ಕೆಎಸ್‌ಟಿಡಿಸಿ ಹೋಟೆಲ್‌ನಲ್ಲಿ ಈಚೆಗೆ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿ,ಮಾರ್ಗದರ್ಶಿಗಳು ಸೂಕ್ತ ಹಾಗೂ ಸರಿಯಾದ ಮಾಹಿತಿ ನೀಡುವ ಮೂಲಕ ಚಿತ್ರದುರ್ಗ ಇತಿಹಾಸವನ್ನು ಪ್ರವಾಸಿಗರಿಗೆ ತಿಳಿಸಬೇಕು.
ಕೋಟೆ ಸೇರಿದಂತೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಲ್ಲಿ ಶುಚಿತ್ವವ ಕಾಪಾಡಿಕೊಳ್ಳಬೇಕು. ಪ್ರವಾಸಿಗರಿಗೆ ಮೂಲ ಸೌಲಭ್ಯಗಳನ್ನು ನೀಡ ಬೇಕು. ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ ಜಿಲ್ಲೆ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚು ಪ್ರಚಲಿತವಿಲ್ಲದ ಜಿಲ್ಲೆಯ ಪ್ರವಾಸಿ ತಾಣಗಳನ್ನೂ ಹೊರಜಗತ್ತಿಗೆ ಪರಿಚಯಿಸುವ ಕೆಲಸವಾಗಬೇಕಿದೆ ಎಂದು ನಾಗವೇಣಿ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಚ್.ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ 2024-29 ರ ಪ್ರವಾಸೋದ್ಯಮ ನೀತಿಯಲ್ಲಿ 39 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದರು. ಮಯೂರ ದುರ್ಗ ಹೋಟೆಲ್ ವ್ಯವಸ್ಥಾಪಕ ಚೇ ತನ್ ಮಾತನಾಡಿದರು. ಸಾಹಸಿ ಜ್ಯೋತಿರಾಜ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪ್ರವಾಸಿ ಮಿತ್ರರು,ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿ ಹಾಗೂ ಪ್ರವಾಸಿ ಮಾರ್ಗದರ್ಶಿಗಳಿಗೆ ಪದಕ ವಿತರಿಸಲಾಯಿತು.ಜಿಲ್ಲಾ ಪ್ರ ವಾಸೋದ್ಯಮ ಸಮಾಲೋಚಕ ಕೆ.ಆರ್.ಮನು ಸ್ವಾಗತಿಸಿದರು. ಬಿ.ಮೊಹಿದ್ದೀನ್ ಖಾನ್ ನಿರೂಪಿಸಿದರು.ಟಿ.ಬಸವರಾಜ್ ವಂದಿಸಿದ ರು.
---