ಪ್ರವಾಹ ಎದುರಾದಲ್ಲಿ ರಜೆ ಘೋಷಿಸಲು ಡಿಸಿ ಸೂಚನೆ

dc
ಜಿಲ್ಲಾಧಿಕಾರಿ ಜಾನಕಿ ಕೆ.ಎಂ
Published on

ಬಾಗಲಕೋಟೆ: ಪ್ರಸ್ತುತ ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಜಲಾನಯನ ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು, ಇದೇ ಪರಿಸ್ಥಿತಿ ಮುಂದುವರೆದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬರುವಂತಹ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅತೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು, ಸ್ಥಳೀಯ ಸ್ಥಿತಿಗತಿ ಆಧರಿಸಿ ಅವಶ್ಯಕತೆ ಅನುಗುಣವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸಂಬಂಧಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net