ಪ್ರವಾಹ ನಿರ್ವಹಣೆ ದಿನದ 24 ಗಂಟೆಗಳ ವಾರ್ ರೂಂ ಸ್ಥಾಪನೆ

dc
ಜಿಲ್ಲಾಧಿಕಾರಿ ಜಾನಕಿ ಕೆ.ಎಂ
Published on

ಬಾಗಲಕೋಟೆ: ಪ್ರಸ್ತುತ ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಜಲಾನಯನ ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು, ಇದೇ ಪರಿಸ್ಥಿತಿ ಮುಂದುವರೆದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾದ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಪ್ರವಾಹ ಪೀಡಿತ ಗ್ರಾಮಸ್ಥರು, ಸಾರ್ವಜನಿಕರಿಂದ ದೂರು ಸ್ವೀಕರಿಸಲು ದಿನ ೨೪ ಗಂಟೆಯ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.

ವಾರ್ ರೂಂ ಟ್ರೋಲ್ ಫ್ರೀ ಸಂಖ್ಯೆ 1077 ಅಥವಾ ಸಹಾಯವಾಣಿ ದೂಸಂ.08354-236240ಗೆ ಸಂಪರ್ಕಿಸಬಹುದಾಗಿದೆ. ದಿನದ 24 ಗಂಟೆಗಳ ಕಾರ್ಯನಿರ್ವಹಿಸಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2, ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆ ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ವರೆಗೆ ಮೂರು ಪಾಳೆಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net