ಪ್ರವಾಹ ನಿರ್ವಹಣೆಗೆ ಸನ್ನದ್ಧರಾಗಿ

9Athni1
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.041666668, 0.15390626);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: -1;
Published on

ಅಥಣಿ: ಜೂನ್ ತಿಂಗಳ ಅಂತ್ಯಕ್ಕೆ ಅಥವಾ ಜುಲೈ ತಿಂಗಳ ಆರಂಭದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗಿ ಕೃಷ್ಣಾನದಿಗೆ ಪ್ರವಾಹ ಬರುವ ಸೂಚನೆ ಇದ್ದು, ಅಧಿಕಾರಿಗಳು ಜಾಗೃತರಾಗಿ ನದಿ ತೀರದಲ್ಲಿರುವ ಜನರಿಗೆ ಮುನ್ಸೂಚನೆ ನೀಡಿ. ನೋಡಲ್ ಅಧಿಕಾರಿ ನೇಮಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಸಕ ಲಕ್ಷ್ಮಣ ಸವದಿ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತ್ರೈಮಾಸಿಕ ೨೦ ಅಂಶಗಳ ಕಾರ್ಯಕ್ರಮ ಸೇರಿ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಮಾತನಾಡಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಮಳೆ ಆರಂಭವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವುದರಿಂದ ಮುಂಜಾಗ್ರತಾ ಕ್ರಮ ಈಗಿನಿಂದಲೆ ಮಾಡಿಕೊಳ್ಳಿ. ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ವಸತಿ ಶಾಲೆಗಳಲ್ಲಿ ನೀಡುವ ಆಹಾರ ಶುದ್ಧ ಹಾಗೂ ಗುಣಮಟ್ಟದಾಗಿರಬೇಕು ನಾನು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದೇನೆ ಎಂದರು.

ಕಳ್ಳಸಂತೆಯಲ್ಲಿ ಮಾರಾಟವಾಗುವ ಪಡಿತರ ಅಕ್ಕಿ ಬಗ್ಗೆ ಆಹಾರ ಇಲಾಖೆ ಗಮನಹರಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ರೈತರಿಗೆ ಸಿಗಬೇಕಾದ ಸೌಲಭ್ಯ ನೀಡುವ ಜತೆಗೆ ಬಿತ್ತನೆ ಬೀಜಗಳ ಕೊರತೆಯಾಗದಂತೆ ಮತ್ತು ವಿಮೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೊಸ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುವುದು ಅದಕ್ಕೆ ಸೂಕ್ತ ಸ್ಥಳ ಕಾಯ್ದಿರಿಸುವಂತೆ ಪಶು ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಕಾರ್ಮಿಕ ಇಲಾಖೆ ವತಿಯಿಂದ ಸುಸಜ್ಜಿತ ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ಸಿಗಲಿದೆ. ಅದಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆ ಇಲಾಖೆಯವರು ಮಾಡಬೇಕು. ತಾಲೂಕಿನಲ್ಲಿ ಸರ್ಕಾರಿ ಜಮೀನು ಅತಿಕ್ರಮಣವಾಗಿರುವ ಮಾಹಿತಿ ಪಡೆದು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕು. ಪಟ್ಟಣದಲ್ಲಿನ ಅತಿಕ್ರಮಣ ತೆರವುಗೊಳಿಸಬೇಕು. ಲ್ಯಾಂಡ್ ಡೆವಲ್‌ಪರಗಳು ಲ್ಯಾಂಡ್‌ಗಳನ್ನು ಅಭಿವೃದ್ಧಿಪಡಿಸಿ, ಮೂಲ ಸೌಕರ್ಯ ಕಲ್ಪಿಸಿದ ಮೇಲೆ ಎನ್‌ಒಸಿ ನೀಡಬೇಕು.

ಜೂ.೨೧ರಂದು ವಿಶ್ವ ಯೋಗ ದಿನದ ಅಂಗವಾಗಿ ಪಟ್ಟಣದ ಎಲ್ಲ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಎಲ್ಲ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ತಹಸೀಲ್ದಾರ್ ಸಿದರಾಯ ಭೋಸಗಿ, ಡಿವೈಎಸ್ಪಿ ಪ್ರಶಾಂತ ಮುನ್ನೋಳಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಸಿಪಿಐ ಸಂತೋಷ ಹಳ್ಳೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net