ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬೆಂಕಿ ಹಚ್ಚಿದ ಆಕ್ರೋಷಿತರು, 144 ಸೆಕ್ಷನ್ ಜಾರಿ ಲೆಕ್ಕಿಸದೆ ಸುಳ್ಯದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು

sulya
ಿತರು, 144 ಸೆಕ್ಷನ್ ಜಾರಿ ಲೆಕ್ಕಿಸದೆ ಸುಳ್ಯದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು
Published on

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದರೂ, ಸುಳ್ಯದಲ್ಲಿ ಹಿಂದೂ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಹಿನ್ನೆಲೆಯಲ್ಲಿ ಪ್ರಮುಖ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಸರ್ಪಕಾವಲು ಮಾಡಲಾಗಿತ್ತು. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ತಕ್ಷಣ ಬಂದಿಸುವಂತೆ, ಮೃತ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಆಗ್ರಹಿಸಿ ಸುಳ್ಯದಲ್ಲಿ 700ಕ್ಕೂ ಮಿಕ್ಕಿದ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಆಕ್ರೋಷಗೊಂಡ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net