ಚಾಮರಾಜನಗರ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂ. ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಅರ್ಜಿಗಳನ್ನು ಸೆ. 19ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು -560001 ಅಥವಾ ಇ-ಮೇಲ್ ವಿಳಾಸ ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.