ಪ್ರಶಸ್ತಿಗೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಏ.5 ರಂದು ಡಾ. ಬಾಬು ಜಗಜೀವನ್ ರಾಂ ಅವರ 118ನೇ ಮತ್ತು ಏಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಶಸ್ತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆ.21ರೊಳಗೆ ಸಲ್ಲಿಸಬೇಕು.

ಒಬ್ಬ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಕನಿಷ್ಟ 35 ವರ್ಷವಾಗಿರಬೇಕು. ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಒಂದು ಪ್ರಶಸ್ತಿಗೆ ಒಬ್ಬ ವ್ಯಕ್ತಿಯಂತೆ ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರಶಸ್ತಿಯನ್ನು ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ದಿನದಂದು ಪ್ರದಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net