ಪ್ರಾಂತ ಕೃಷಿ ಕೂಲಿಗಾರರ ಸಂಘ ಧರಣಿ

29 krp 01
Published on

ಕೆ.ಆರ್.ಪೇಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಗಾರರ ಸಂಘ ಪಟ್ಟಣದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿತು.

ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಮಾತನಾಡಿ, ತಾಲೂಕಿನ ಕಿಕ್ಕೇರಿ ಗ್ರಾಮದ ಎಪಿಎಂಸಿ ಮುಂಭಾಗ ಸರ್ವೇ ನಂಬರ್ 6ರಲ್ಲಿ 40 ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಬಡವರಿಗೆ ಹಕ್ಕುಪತ್ರ ನೀಡಬೇಕು. ಚಿಕ್ಕ ಮಂದಗೆರೆ, ಮಂದಗೆರೆಕೊಪ್ಪಲು ಗ್ರಾಮಗಳ ಕೆರೆಗಳನ್ನು ಒತ್ತುವರಿ ತೆರವುಗೊಳಿಸಿಬೇಕು. ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕೆಲಸ ನೀಡಬೇಕು. ವಿದ್ಯುತ್ ಇಲ್ಲದ ಕುಟುಂಬಕ್ಕೆ ಬೆಳಕು ಯೋಜನೆಯಡಿ ವಿದ್ಯುತ್ ಕಲ್ಪಿಸಬೇಕು. ಮೈಕ್ರೋಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಬೇಕು ಎಂದು ತಾಲೂಕು ಆಡಳಿತವನ್ನು ಒತ್ತಾಯಿಸಿದರು.

ತಹಸೀಲ್ದಾರ್ ಎಂ.ವಿ.ರೂಪಾ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಹಿಂಪಡೆಯಲಾಯಿತು. ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮೇಶ್, ಕೃಷ್ಣಯ್ಯ ಗಂಗೇನಹಳ್ಳಿ, ಜಯರಾಮು ಗಂಗೇನಹಳ್ಳಿ, ಚಂದ್ರು, ಗಂಗೇನಹಳ್ಳಿ ಜಾಯಿರ್, ಅಹಮ್ಮದ್ ಕಿಕ್ಕೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net