

ಹಲಗೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಕಠಿಣ ಶಿಕ್ಷೆ ವಿಧಿಸಬೇಕು. ಸರ್ಕಾರ 10 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಜನವಾದಿ ಮಹಿಳಾ ಸಂಘಟನೆಯಿಂದ ಶುಕ್ರವಾರ ನಾಡಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ದೊಡ್ಡ ಎಲಚಗೆರೆ ಗ್ರಾಮದ ಮಲ್ಲಿಕಾರ್ಜುನ ಎಂಬಾತ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿವೆ. ಶಾಸಕರಾಗಲಿ, ಸಂಸದರಾಗಲಿ ಕುಟಂಬದವರಿಗೆ ಸಾಂತ್ವನ ಹೇಳುವ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್.ಭರತ್ ರಾಜ್, ಎನ್.ಲಿಂಗರಾಜಮೂರ್ತಿ ಎ.ಎಲ್.ಶಿವಕುಮಾರ್, ಶಿವಪ್ಪ, ಗಣೇಶ್, ಎಸ್.ಕೆ ಶಿವಕುಮಾರ್, ರಾಜು, ಸಾಗ್ಯ ಸಣ್ಣಶೆಟ್ಟಿ, ಮಹಾದೇವು, ಪ್ರಮೀಳಾ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮಂಜುಳಾ, ಸುನೀತಾ, ಜಯಲಕ್ಷ್ಮೀ, ಪದ್ಮಾ ಇದ್ದರು.