ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

3 mlv 3
Published on

ಮಳವಳ್ಳಿ: ಅಗತ್ಯ ವಸ್ತುಗಳು ಹಾಗೂ ಗ್ಯಾಸ್ ಬೆಲೆ ಹೆಚ್ಚಳ ಖಂಡಿಸಿ ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಮುಂದೆ ಗ್ಯಾಸ್ ಸಿಲಿಂಡರ್ ಉಲ್ಟಾ ಇಟ್ಟು ಪಕ್ಕದಲ್ಲೇ ಸೌದೆ ಒಲೆಯಲ್ಲಿ ಟೀ ಕಾಯಿಸಿ ಸಾರ್ವಜನಿಕರಿಗೆ ವಿತರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸಂಘದ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್‌ರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ರಸಗೊಬ್ಬರ, ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟಾಗಿವೆ. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಆಹಾರ ಧಾನ್ಯಗಳಿಗೆ ಅನುದಾನ ಕಡಿತ ಮಾಡಲಾಗಿದೆ. ಹಸಿವಿನ ಸೂಚ್ಯಂಕದಲ್ಲಿ ಭಾರತ 107ನೇ ಸ್ಥಾನದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯದರ್ಶಿ ಎನ್.ಲಿಂಗರಾಜಮೂರ್ತಿ, ಶಿವಕುಮಾರ್, ಚಿಕ್ಕಸ್ವಾಮಿ, ಹಿಪ್ಜುಲ್ಲಾ, ಜಿ.ರಾಮಕೃಷ್ಣ, ತಿಮ್ಮೆಗೌಡ, ಶಿವಕುಮಾರ್, ಸತೀಶ್, ದೊಡ್ಡಮರಿಗೌಡ ಪ್ರಕಾಶ್, ಸಿದ್ದರಾಜ್, ಗೌರಮ್ಮ, ಚನ್ನಬಸಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net