

ಚಿಟಗುಪ್ಪ: ರಕ್ತದಾನದಿಂದ ಒಬ್ಬರ ಪ್ರಾಣ ಉಳಿಸುವ ಪುಣ್ಯದ ಕೆಲಸ ಮಾಡಿದಂತೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಮಠಾಣಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಯುವ ಮೋರ್ಚಾದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ ಕಾರ್ಯಕ್ರಮದ ಭಾಗವಾಗಿ ಗುರುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಟಿಎಚ್‌ಒ ಸಂಗಾರೆಡ್ಡಿ, ಡಾ.ರೇಣುಕಾ ಜಾಧವ್, ಬಿಜೆಪಿ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಾಬಾದ್, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಸ್ವಾಮಿ, ಪ್ರಮುಖರಾದ ಚನ್ನಪ್ಪ ಗೌರಶೆಟ್ಟಿ , ಸುರೇಶ ಮಾಶೆಟ್ಟಿ, ಶಿವಕುಮಾರ ಸ್ವಾಮಿ, ನಾಗಭೂಷಣ ಕಮಠಾಣ, ಬಸವರಾಜ ಸಿಂದಬಂದಗಿ, ಅನೀಲ ಗೌನ್ನಳ್ಳಿ, ಜಗನ್ನಾಥ ಪಾಟೀಲ್, ಹೇಮಾ ತುಕ್ಕಾರೆಡ್ಡಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್, ಪ್ರಧಾನ ಕಾರ್ಯದರ್ಶಿ ಜನಾರ್ಧನ ರೆಡ್ಡಿ, ಸಾಯಿನಾಥ ಪಾಟೀಲ್ ಇತರರಿದ್ದರು.