

ಬಾಗಲಕೋಟೆ: ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಪ್ರತಿಭಾ ಕಾರಂಜಿ ಕಲೋತ್ಸವದಂತ ಕಾರ್ಯಕ್ರಮಗಳು ಅಗತ್ಯವಾಗಿದ್ದು, ತನ್ಮೂಲಕ ಪ್ರತಿಭೆಗಳನ್ನು ಗುರುತಿಸಬಹುದಾಗಿದೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಎಂದು ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ನವನಗರದ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಬೌದ್ಧಿಕ, ಮಾನಸಿಕ ಮತ್ತು ದೈಹಿಕವಾಗಿ ಸದೃಢಗೊಳಿಸುತ್ತದೆ. ಶಿಕ್ಷಣ ರಂಗದಲ್ಲಿ ಎಲ್ಲ ರೀತಿ ಸೌಲಭ್ಯಗಳು ಇರುವುದರಿಂದ ಕಲಿಯುವವರ ಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಸದಸ್ಯ ಅಂಬಾಜಿ ಜೋಶಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಽಕಾರಿ ಶಿವಾನಂದ ಪಟ್ಟಣಶೆಟ್ಟಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ನೋಡಲ್ ಅಧಿಕಾರಿ ಡಿ.ಎಂ.ಯಾವಗಲ್, ದೊಡ್ಡಬಸಪ್ಪ ನೀರಲಕೇರಿ ಉಪಸ್ಥಿತರಿದ್ದರು.