ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೌಲಭ್ಯ ಕಲ್ಪಿಸಿ

13 Jaggu 5-Web
ಡಾ. ಸೋನಾಲಿ ಸರ್ನೋಬತ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಖಾನಾಪುರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಗುರುವಾರ ಮನವಿ ಸಲ್ಲಿಸಿದರು.
Published on

ಬೆಳಗಾವಿ: ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಭೇಟಿಯಾಗಿ ಖಾನಾಪುರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಖಾನಾಪುರ ದೊಡ್ಡ ತಾಲೂಕು. 35 ಸಾವಿರಕ್ಕಿಂತ ಹೆಚ್ಚು ಮತದಾರರಿದ್ದಾರೆ. ತಾಲೂಕಿನಲ್ಲಿ ಅಭಿವೃದ್ಧಿ ಅಗತ್ಯವಿದೆ. ಕೇವಲ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತವೆಯಾದರೂ, ಪರಿಣಾಮಕಾರಿಯಾಗಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಈ ಕೇಂದ್ರಗಳ ಸಂಖ್ಯೆ ಹೆಚ್ಚಿಸಿ, ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಇತರ ಮುಖಂಡರು ಈ ವೇಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net