ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ

30_SDL_Hospitals
Published on

ಶಿಡ್ಲಘಟ್ಟ : ಗ್ರಾಮಾಂತರ ಪ್ರದೇಶದಲ್ಲಿಯೇ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಕರೊನಾ ಮೂರನೇ ಅಲೆ ಎದುರಿಸಲು ಹಾಗೂ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಪಂ ಸಿಇಒ ಪಿ.ಶಿವಶಂಕರ್ ತಿಳಿಸಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಶುಕ್ರವಾರ ಪರಿಶೀಲಿಸಿ, ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕ ಸಮರ್ಪಕ ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿಯಿಂದ ಆಮ್ಲಜನಕವನ್ನು ತರಿಸಲಾಗಿತ್ತು, ಈ ಸಮಸ್ಯೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆ ಮತ್ತು ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿ.ಎಸ್.ಆರ್. ಅನುದಾನದಲ್ಲಿ ನಿಮಿಷಕ್ಕೆ 250 ಲೀಟರ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯದ ಘಟಕ ನಿರ್ಮಿಸಲಾಗಿದ್ದು, ನಿರ್ಮಾಣ ಸಂಪೂರ್ಣ ಮುಗಿದಿದೆ, ಸಣ್ಣ-ಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ ಎಂದು ವಿವರಿಸಿದರು.

ಎಲ್ಲ ತಾಲೂಕು ಕೇಂದ್ರಗಳಲ್ಲೂ ಆಮ್ಲಜನಕಯುಕ್ತ ಹಾಸಿಗೆಗಳುಳ್ಳ ಕೋವಿಡ್ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಸಿ.ಎಸ್.ಆರ್. ಅನುದಾನದಲ್ಲಿ ಜಂಗಮಕೋಟೆಯ ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಕೊಠಡಿ ಅನುದಾನದಲ್ಲಿ ನಿರ್ಮಿಸಲಾಗುತ್ತಿದ್ದು, ಯುನೈಟೆಡ್ ವೇ ಸಂಸ್ಥೆ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net