ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಘೇರಾವ್

17BLH10-Web
ಸಂಗೊಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟಿಸಿದರು. ಗ್ರಾಪಂ ಅಧ್ಯಕ್ಷ ಫಕೀರಪ್ಪ ಕುರಿ, ಸದಸ್ಯರಾದ ಬಸವರಾಜ ಕೊಡ್ಲಿ, ಶಿವಕುಮಾರ ಪೂಜಾರ ಇತರರು ಇದ್ದರು.
Published on

ಬೈಲಹೊಂಗಲ: ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಗ್ರಾಮಸ್ಥರು ಘೇರಾವ ಹಾಕಿ ಪ್ರತಿಭಟಿಸಿದ ಘಟನೆ ಸೋಮವಾರ ಜರುಗಿದೆ. ಆಸ್ಪತ್ರೆಗೆ ಯಾವುದೇ ರೋಗಿಗಳು ಹೋದರೂ, ಅವರಿಗೆ ಸರಿಯಾಗಿ ಚಿಕಿತ್ಸೆ ನಿಡುತ್ತಿಲ್ಲ, ಸರಿಯಾಗಿ ಸ್ಪಂದಿಸುತ್ತಿಲ್ಲ , ವಸತಿ ಗೃಹದಲ್ಲಿ ವೈದ್ಯರು ವಾಸವಾಗಿದ್ದರು ಕೂಡ, ಸಂಜೆಯಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಯಾರೂ ಇರದೆ ಆಸ್ಪತ್ರೆಗೆ ಬೀಗ ಹಾಕಿರುತ್ತಾರೆ. ಇದರಿಂದಾಗಿ ದಿನನಿತ್ಯವೂ ಸಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ವೈದ್ಯರ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಪಂ ಅಧ್ಯಕ್ಷ ಫಕೀರಪ್ಪ ಕುರಿ, ಸದಸ್ಯರಾದ ಬಸವರಾಜ ಕೊಡ್ಲಿ, ಶಿವಕುಮಾರ ಪೂಜಾರ, ಈರಣ್ಣ ಹಳೆಮನಿ, ನ್ಯಾಯವಾದಿ ಉಮೇಶ ಲಾಳ ಹಾಗೂ ಸಂಗೊಳ್ಳಿ ಹಾಗೂ ಸುತ್ತಲಿನ ಗ್ರಾಮಸ್ಥರು ಇದ್ದರು. ನಂತರ ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳಿಗೆ ಹಾಗೂ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net