ಪ್ರಾಥಮಿಕ ಶಾಲೆ ಶಿಕ್ಷಕರಿಗೂ ಅವಕಾಶ ನೀಡಿ

28 KAMPLI 05
Published on

ಕಂಪ್ಲಿ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಮತದಾರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಎಮ್ಮಿಗನೂರಿನ ಗ್ರಾಮ ಆಡಳಿತಾಧಿಕಾರಿ ಮಹ್ಮದ್ ರಫೀಕ್‌ಗೆ ಅತಿಥಿ ಶಿಕ್ಷಕರು ಮಂಗಳವಾರ ಮನವಿ ಸಲ್ಲಿಸಿದರು.

ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಮಲ್ಲೇಶ್ ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ಪ್ರಗತಿಯಲ್ಲಿದ್ದು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಹೆಸರು ನೋಂದಾಯಿಸಲು ಅವಕಾಶ ಇಲ್ಲ. ಇದರಿಂದಾಗಿ ಪ್ರಾಥಮಿಕ ಶಾಲೆಗಳ ಶಿಕ್ಷಕರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ಎಸ್.ರಾಮು, ಅತಿಥಿ ಶಿಕ್ಷಕರಾದ ರಾಜಾಸಾಬ್, ಹನುಮಂತಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net