ಪ್ರಾಧ್ಯಾಪಕರ ನೇಮಕಾತಿ ವಿರುದ್ಧ ಪತ್ರ ಚಳವಳಿ

Published on

ಮೈಸೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣದ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಸಿ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿಯಿಂದ ಸರ್ಕಾರಕ್ಕೆ ಪತ್ರ ಚಳವಳಿ ನಡೆಯಿತು.
ನಗರಪಾಲಿಕೆ ಮುಂಭಾಗ ಇರುವ ಆಂಚೆ ಪೆಟ್ಟಿಗೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ರವಾನೆ ಮಾಡುವ ಮೂಲಕ ಪತ್ರ ಚಳವಳಿ ಮಾಡಲಾಯಿತು.
2021ರಲ್ಲಿ ಅಧಿಸೂಚನೆಯನ್ನು ಹೊರಡಿಸಿ 2022ರಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಬಂದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಇನ್ನೂ ಸ್ಪಷ್ಟ ನಿರ್ಧಾರ ಇಲ್ಲದೇ ಇರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಭೂಗೋಳಶಾಸ್ತ್ರದ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ತನಿಖೆ ಜರುಗುತ್ತಿದೆ. ಆದರೆ ಇತರ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಮಾಜಿ ಮೇಯರ್ ಪುರುಷೋತ್ತಮ, ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್, ನಗರಪಾಲಿಕೆ ಮಾಜಿ ಸದಸ್ಯ ಮಂಜುನಾಥ್, ಅರಸು ಮಂಡಳಿ ಮಾಜಿ ಅಧ್ಯಕ್ಷ ಎಚ್.ಡಿ. ನಂಜರಾಜೇಅರಸ್, ಸಮಿತಿಯ ಸದಸ್ಯರಾದ ದ್ಯಾವಪ್ಪನಾಯ್ಕ, ರಧಿವುಲ್ಲಾಖಾನ್, ಪವನ್ ಸಿದ್ದರಾಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net