

ಬಳ್ಳಾರಿ : ಎಪಿಎಂಸಿ ಅಧ್ಯಕ್ಷರಾಗಿ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವೆ ಎಂದು ಎಪಿಎಂಸಿ ನೂತನ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ ಹೇಳಿದರು.
ನಗರದ ಎಪಿಎಂಸಿ ಕಚೇರಿಯಲ್ಲಿ ಗುರುವಾರ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಮಾತನಾಡಿದರು. ನಾನು ರೈತ ಕುಟುಂಬದಿಂದ ಬಂದಿರುವೆ. ನಮ್ಮ ಕಾಂಗ್ರೆಸ್ ಪಕ್ಷ , ಶಾಸಕರು, ಸಂಸದರು ಹಾಗೂ ಮುಖಂಡರ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವೆ. ರೈತರ ಏಳಿಗೆಗೆ ಅಗತ್ಯ ಸಹಕಾರ ನೀಡಲಾಗುವುದು. ಮಾರುಕಟ್ಟೆಯ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ನೆರವು ಪಡೆದು ಅಭಿವೃದ್ಧಿ ಮಾಡುವೆ. ಹಮಾಲರು, ವರ್ತಕರ ಸಮಸ್ಯೆಗಳ ಪರಿಹಾರದ ಬಗ್ಗೆಯೂ ಸಭೆ ನಡೆಸಿ ಕ್ರಮವಹಿಸಿವೆ ಎಂದು ಹೇಳಿದರು.