ಪ್ರಾಮಾಣಿಕತೆಯಿಂದ ಬದುಕಿಗೆ ನೆಮ್ಮದಿ

bkt-29-1
ಬಾಗಲಕೋಟೆ ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪುರ ಕಲಾ ಮತ್ತು ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಮಂಗಳವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ.
Published on

ಬಾಗಲಕೋಟೆ: ಶ್ರದ್ಧೆ ಹಾಗೂ ಪ್ರಮಾಣಿಕತೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಅದು ಬದುಕಿನಲ್ಲಿ ನೆಮ್ಮದಿಯನ್ನು ತರಬಲ್ಲದು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪುರ ಕಲಾ ಮತ್ತು ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಮಂಗಳವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಪಡೆದರೆ ಭಾವೀ ಜೀವನದಲ್ಲಿ ಪ್ರಾಮಾಣಿಕತೆಯಂತಹ ಹಲವು ಜೀವನದ ಮೌಲ್ಯಗಳನ್ನು ಬೆಳೆಸಿಕೊಳ್ಳಬಹುದು ಎಂದರು.

ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗು ಅದರಿಂದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ, ಆದ್ದರಿಂದ ಸಂಘಟಿತ ಪ್ರಯತ್ನದಿಂದ ಅದರ ನಿರ್ಮೂಲನೆಗೆ ಯುವಕರು ಕೈಜೋಡಿಸಬೇಕು ಎಂದು ತಿಳಿಸಿದರು.

ಎಲ್ಲವನ್ನೂ ಕಾನೂನು ಒಂದರಿಂದಲೇ ಬಗೆಹರಿಸಲಾಗದು. ಮನ ಪರಿವರ್ತನೆಯಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಎನ್‌ಎಸ್‌ಎಸ್ ಅಽಕಾರಿ ನಾಗರಾಜ ಹಸಬಿ ಸ್ವಾಗತಿಸಿ, ಪ್ರತಿಜ್ಞಾವಿಽ ಬೋಽಸಿದರು ಉಪನ್ಯಾಸಕಿ ಶ್ವೇತಾ ಕುಲಕರ್ಣಿ ನಿರೂಪಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಎಚ್ ಎಸ್ ಗಿಡಗಂಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net