ಬೇಲೂರು: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ಪಟ್ಟಣದ ಶ್ರೀ ವಿದ್ಯಾ ವಿಕಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆ.ಜೆ.ಪ್ರಾರ್ಥನಾ 587 ಹಾಗೂ ವಾಣಿಜ್ಯ ವಿಭಾಗದಲ್ಲಿ ಫಾತಿಮಾ ಸಫೀರ 588 ಅಂಕಗಳನ್ನು ಪಡೆದು ಬೇಲೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶ್ರೀ ವಿದ್ಯಾ ವಿಕಾಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಸತತವಾಗಿ ನಾಲ್ಕನೇ ಬಾರಿಗೆ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಇದೇ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆ.ಜೆ.ಪ್ರಾರ್ಥನಾ 600ಕ್ಕೆ 587 (ಶೇ.97.83), ಕೆ.ಸಿ.ಅಂಕಿತಾ 575 (ಶೇ.95.830) ಅಂಕ ಗಳಿಸಿ ತಾಲೂಕಿಗೆ ದ್ವಿತೀಯ, ಪ್ರಿನ್ಸ್ ಲಿಯೋ 574 (ಶೇ.95.66) ಅಂಕ ಪಡೆದು ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಫಾತಿಮಾ ಸಫೀರ 588 (ಶೇ.98) ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಎಚ್.ಎನ್.ಕುಮಾರಿ 585 ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ, ಅನ್ವಿತಾ ಹೆಗ್ಗದೆ 564 ಅಂಕ ಪಡೆಯುವ ಮೂಲಕ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆಯ ಕಾರ್ಯದರ್ಶಿ ಮತ್ತು ಪ್ರಾಂಶುಪಾಲ ಡಾ.ಎಂ.ಎಂ.ರಮೇಶ್, ಅಧ್ಯಕ್ಷ ಬಿ.ಎಂ.ರಂಗನಾಥ್ ಅಭಿನಂದನೆ ಸಲ್ಲಿಸಿದ್ದಾರೆ.