ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳದಿದ್ದಲ್ಲಿ  ಚಿತ್ತಾಪುರ ಚಲೋ

IMG-20220826-WA0037.jpg
Published on

ದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಪ್ರಿಯಾಂಕ್ ಖರ್ಗೆ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಬಿಜೆಪಿ ಮಹಿಳಾ ಮೋರ್ಚಾದಿಂದ ಶೀಘ್ರದಲ್ಲೇ ಚಿತ್ತಾಪುರ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪಕ್ಷದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ಮಹೇಶ್ ಹೇಳಿದರು.

ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಇದು ಲಂಚದ ಸರ್ಕಾರ ಎಂದು ಹೇಳುವ ಮೂಲಕ ಪ್ರಿಯಾಂಕ್ ಖರ್ಗೆ ಅವರು ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಖಂಡನೀಯ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಹೆಣ್ಣು ಮಕ್ಕಳಿಗೆ ಗೌರವ ಕೊಡದ ನಿಮ್ಮ ಸಂಸ್ಕಾರ ಎಂತಹುದು ಎಂದು ತಿಳಿಯುತ್ತದೆ. ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಮಗನಾಗಿ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7 ರವರೆಗೆ ಸೇವಾ ಹೀ ಸಮರ್ಪಣ್ ಕಾರ್ಯಕ್ರಮದ ಅಡಿಯಲ್ಲಿ ಸಸಿ ನೆಡುವುದು, ಸ್ವಚ್ಛತೆ, ಆರೋಗ್ಯ ತಪಾಸಣೆ ಸೇರಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವನ ದೇವಸ್ಥಾನದಲ್ಲಿ ಅಭಿಷೇಕ, ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪುಷ್ಪಾ ವಾಲಿ, ಸರ್ವಮಂಗಳಾ, ಜಯಲಕ್ಷ್ಮೀ, ರೂಪಾ ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net