ಪ್ರಿಯಾಂಕ್ ಖರ್ಗೆ ವಿರುದ್ಧ ಸಿಡಿದೆದ್ದ ಮಣಿಕಂಠ ಅಭಿಮಾನಿಗಳು

IMG-20221206-WA0031
Published on

ಕಲಬುರಗಿ: ಬಿಜೆಪಿ ಮುಖಂಡ, ಉದ್ಯಮಿ ಮಣಿಕಂಠ ರಾಠೋಡ್ ಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಸಹಸ್ರಾರು ಅಭಿಮಾನಿಗಳು, ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಲಾಯಿತು‌.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸಹಸ್ರಾರು ಬೆಂಬಲಿಗರು, ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಣಿಕಂಠ ರಾಠೋಡ ವಿರುದ್ಧ ಸುಳ್ಳು ದೂರು, ಆರೋಪ ಮಾಡಿದ ಪ್ರಿಯಾಂಕ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಣಿಕಂಠಗೆ ಕಾಂಗ್ರೆಸ್ ಮುಖಂಡರು, ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗರಿಂದ ಜೀವ ಬೆದರಿಕೆ ಇದ್ದು, ಕೊಲೆಗೆ ಸಂಚು ರೂಪಿಸಲಾಗಿದೆ. ಆದ್ದರಿಂದ ಅವರಿಗೆ ಕೂಡಲೇ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಚಿತ್ತಾಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಹಸ್ರಾರು ಜನರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net