ಪ್ರಿಯಾಂಕ್ ವಿರುದ್ಧ ಮಾತು ಅನಾವಶ್ಯಕ

oppo_2
oppo_2
Published on

ಕಲಬುರಗಿ: ಸಚಿನ್ ಪಾಂಚಾಳ ಆತ್ಮಹತ್ಯೆ ಕೇಸ್ ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣದಲ್ಲಿ ಸಬಂಧವಿರದ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕತೆ ಇಲ್ಲ ಎಂದು ಕರ್ನಾಟಕ ಪ್ರದೇಶ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ತಿಪ್ಪಣ್ಣ ಒಡೆಯರಾಜ್ ಹೇಳಿದರು. ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ದುಃಖಕರ. ಕುಟುಂಬಕ್ಕೆ ಆಧಾರವಾಗಿದ್ದ ಯುವಕನ ಸಾವಿನ ಕುರಿತು ನೋವಿದೆ. ಆದರೆ ಬಿಜೆಪಿ ಹೆಣಗಳ ಮೇಲೆ ರಾಜಕೀಯ ಮಾಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಖಂಡಿಸಿದರು. ದಲಿತ ಸಮುದಾಯ ಸಚಿವ ಪ್ರಿಯಾಂಕ್ ಖರ್ಗೆ ಏಳಿಗೆ ಸಹಿಸದೆ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಸೇರಿ ಇತರರು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಬಿಜೆಪಿ ನಾಯಕರೇ ಅಕ್ರಮ, ಅನಾಚಾರದಲ್ಲಿ ತೊಡಗಿದ್ದಾರೆ ಎಂದರು. ಚನ್ನಪ್ಪ ದಂಡಗುಲಕರ್, ಸುಭಾಷ ಚಿತ್ತಾಪುರ, ಯಲಪ್ಪ, ದೇವಿಂದ್ರ ನಡುವಿನಮನಿ, ರಾಜು ಐನಾಪುರೆ, ಹರಿ ಜಾಧವ, ರಮೇಶ ಪವಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net