ಪ್ರೀತಿ-ಪ್ರೇಮದ ವ್ಯಾಮೋಹಕ್ಕೆ ಸಿಲುಕಿದರೆ ಭವಿಷ್ಯ ಹಾಳು,ನ್ಯಾಯಾಧೀಶೆ

IMG_20230822_183352 (1)--03
Published on

ಚಿತ್ರದುರ್ಗ: ಉತ್ತಮ ಶಿಕ್ಷಣ ಪಡೆದು ಪಾಲಕರಿಗೆ ಒಳ್ಳೆಯ ಮಕ್ಕಳಾಗಿ ಹಾಗೂ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕು ಬೇಕೆಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ,ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ನಗರದ ಸರ್ಕಾರಿ ಮೆಟ್ರಿ ಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಪೋಕ್ಸೋ ಕಾಯ್ದೆ ಕುರಿತ ಕಾನೂನು ಅರಿವು ನೆರವು ಕಾರ‌್ಯಕ್ರಮ ಉ ದ್ಘಾಟಿಸಿ ಮಾತನಾಡಿದ ಅವರು,ವಿದ್ಯಾರ್ಥಿಗಳಿಗೆ ಸಂವಿಧಾನದ ಅಧ್ಯಯನವೂ ಮುಖ್ಯ.
ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರ ಸೌಲಭ್ಯಗಳನ್ನು ನೀಡಿದೆ. ಬಾಲ್ಯವಿವಾಹದ ದು ಷ್ಪರಿಣಾಮಗಳು ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿತು,ಜನರಲ್ಲಿ ಜಾಗೃತಿ ಮೂಡಿಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ಅಪ್ರಾ ಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ 2012ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೊಳಿಸಲಾಗಿದೆ.
18ವರ್ಷಕ್ಕೆ ಒಂದು ದಿನ ಕಡಿಮೆ ಇದ್ದರು ಅವರನ್ನು ಮಕ್ಕಳೆಂದು ಪರಿಗಣಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗ ಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಪ್ರೀತಿ-ಪ್ರೇಮದ ವ್ಯಾಮೋಹ ದಿಂದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಲೈಂಗಿಕ ದೌರ್ಜನ್ಯದ ವಿರುದ್ಧ ಮಕ್ಕಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕರೆಮಾಡಿ ರಕ್ಷಣೆ ಪಡೆದುಕೊಳ್ಳ ಬಹುದೆಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಮಾತನಾಡಿ,ಪೋಕ್ಸೋ ಪ್ರಕರಣಗಳಲ್ಲಿ ಮೈಸೂರು ಮೊ ದಲನೇ ಸ್ಥಾನದಲ್ಲಿದ್ದರೆ,ಚಿತ್ರದುರ್ಗ 2ನೇ ಸ್ಥಾನದಲ್ಲಿ ಇದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಶಾಲೆ,ಕಾಲೇಜು ಬಿಟ್ಟಿರುವಂತಹ ನೊಂದ ಬಾ ಲಕಿಯರನ್ನು ಪುನಃ ಶಾಲಾ,ಕಾಲೇಜುಗಳಿಗೆ ಕರೆತರ ಬೇಕಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ,ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಅವನತಿಗೆ ಕಾರಣವಾಗಲಿದೆ ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು. ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿ.ಜಗದೀಶ ಹೆಬ್ಬಳ್ಳಿ,ವಕೀಲರ ಸಂಘದ ಪ್ರಧಾನ ಕಾರ‌್ಯದರ್ಶಿ ಆರ್.ಗಂಗಾಧರ್,ಸಮಾಜಕಲ್ಯಾಣಇಲಾಖೆ ನೋಡಲ್ ಅಧಿಕಾರಿ ಚಂದ್ರಕಲಾ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೃಷ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net