

ಯಾದಗಿರಿ: ಪರಿಸರ ಸಂರಕ್ಷ ಣೆ ಮೂಲ ಕರ್ತವ್ಯವಾಗಬೇಕು. ನಮ್ಮ ಹಿಂದಿನ ಪೀಳಿಗೆ ಕೊಟ್ಟ ಪರಿಸರವನ್ನು ಕಾಪಾಡಿ ಶುದ್ಧವಾಗಿ ಮುಂದಿನ ಪೀಳಿಗೆಗೆ ನೀಡಬೇಕು. ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಶಿಕ್ಷಕ ಡಾ.ರಾಜೇಂದ್ರಕುಮಾರ ಮುದ್ನಾಳ್ ತಿಳಿಸಿದರು.
ಸೋಮವಾರ ತಾಲೂಕಿನ ಠಾಣಗುಂದಿ ಸಕರ್ಾರಿ ಪ್ರಾಥಮಿಕ ಶಾಲೆಯಲ್ಲಿ ಹುಬ್ಬಳ್ಳಿಯ ಯೂಥ್ ಫಾರ್ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ಗಾಳಿ, ನೀರು, ಮಣ್ಣು ಮತ್ತು ವಾತಾವರಣ ಕಲುಷಿತಗೊಂಡು ರೋಗಗಳು ಹರಡುತ್ತವೆ. ಹಾಗಾಗಿ ಪ್ರತಿಯೊಬ್ಬರು ಜಾಗೃತರಾಗಿ ಇದರ ಬಳಕೆ ಸಂಪೂರ್ಣವಾಗಿ ನಿಲ್ಲಿಸಬೇಕು ಎಂದರು.
ಶಿಕ್ಷಕ ಶಿವಶಂಕರ ಮಾತನಾಡಿ, ಪ್ರತಿಯೊಬ್ಬರ ಮನೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಪಣತೊಡಬೇಕಾಗಿದೆ. ಅಡುಗೆ ಮನೆಯ ಸಾಮಾಗ್ರಿಗಳು ಪ್ಲಾಸ್ಟಿಕ್ಮಯವಾಗುವುದನ್ನು ನಿಲ್ಲಿಸಬೇಕು. ಇದು ಸವಾಲಿನ ಕೆಲಸವಾದರೂ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಚೀಲಗಳನ್ನು ಬಳಸಲು ಮುಂದಾಗಬೇಕು. ಈ ಬಗ್ಗೆ ವಿದ್ಯಾಥರ್ಿಗಳು ತಿಳಿವಳಿಕೆ ಮೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯಗುರು ಗೋಪಾಲಕೃಷ್ಣ, ಶಿಕ್ಷಕರಾದ ಚನ್ನಬಸವ, ಶರಣಪ್ಪ, ವಿದ್ಯಾನಾಥ, ಭೀಮಬಾಯಿ ಹಾಗೂ ಸುರೇಖಾ ಇದ್ದರು.