ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ

03bhr 1 web
Published on

ಬಾಳೆಹೊನ್ನೂರು: ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ ಎಂದು ಇನ್ನರ್​ವ್ಹೀಲ್ ಕ್ಲಬ್ ಅಧ್ಯಕ್ಷೆ ಸುಚಿತಾ ಹೆಗ್ಡೆ ಹೇಳಿದರು.

ಇನ್ನರ್​ವ್ಹೀಲ್ ಕ್ಲಬ್​ನಿಂದ ಪಟ್ಟಣದ ಜೇಸಿ ವೃತ್ತದಲ್ಲಿ ಹಾಗೂ ಮೇಲ್ಪಾಲ್​ನ ಬಾಪೂಜಿ ಕಾಲನಿಯಲ್ಲಿ ಬುಧವಾರ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮಾಹಿತಿ ನೀಡಿದರು.

ಪ್ಲಾಸ್ಟಿಕ್ ಉತ್ಪನ್ನಗಳು ನೂರಾರು ವರ್ಷಗಳ ಕಾಲ ಭೂಮಿಯಲ್ಲಿ ಇದ್ದರೂ ಕರಗದೆ ಭೂಮಿಯ ಫಲವತ್ತತೆಯನ್ನು ಹಾಳುಮಾಡುತ್ತದೆ. ಆದ್ದರಿಂದ ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿಕೊಳ್ಳಬೇಕು ಎಂದರು.

ನಿತ್ಯಬಳಕೆಗೆ ಯಾವುದೇ ವಸ್ತುಗಳನ್ನು ಕೊಂಡೊಯ್ಯುವಾಗ ಬಟ್ಟೆ ಹಾಗೂ ಪೇಪರ್ ಚೀಲಗಳಿಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net