

ಚಿಕ್ಕಮಗಳೂರು: ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ಗುರಿ ಹೊಂದಿದೆ. ಅದರಂತೆ ಅಧಿಕಾರಿ, ಸಿಬ್ಬಂದಿ ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ವರ್ತಕರಿಗೆ ಸುಮಾರು ೧೫ ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ತಿಳಿಸಿದರು.
ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಶನಿವಾರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಗೆ ಎಚ್ಚರಿಕೆ ನೀಡಿ ಮಾತನಾಡಿದರು.
ನಗರದ ವರ್ತಕರಿಗೆ ಇದು ಸರಿಯಾದ ಪಾಠವಾಗಿದೆ. ಮುಂದೆ ಯಾರೂ ಈ ತಪ್ಪು ಮಾಡಬಾರದು. ಪ್ಲಾಸ್ಟಿಕ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ವರ್ತಕರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದ ದೇವಿಸ್ಟೋರ್ ಸೇರಿದಂತೆ ಇನ್ನಿತರೆ ಅಂಗಡಿಗಳಲ್ಲಿ ನಗರಸಭೆ ನೀಡಿರುವ ಸೂಚನೆಗಳನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ೩೦೦ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ೧೫ ಸಾವಿರ ರೂ ದಂಡ ವಿಧಿಸಲಾಗಿದೆ ಎಂದರು.
ನಗರದ ವರ್ತಕರು ಮುಂದೆ ಇದೇ ರೀತಿಯ ತಪ್ಪು ಮಾಡಿದರೆ ನಗರಸಭೆಯಿಂದ ನೀಡಿರುವ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ, ಶಾಶ್ವತವಾಗಿ ಅಂಗಡಿಯನ್ನು ಮುಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಕಲ್ಯಾಣ ಮಂಟಪ, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ನಗರಸಭೆಯಲ್ಲಿ ಸಭೆ ನಡೆಸಿ ಸೂಕ್ತ ಎಚ್ಚರಿಕೆ ನೀಡಿದ್ದರೂ ಸೂಚನೆಗಳನ್ನು ಪಾಲನೆ ಮಾಡದೆ ಪ್ಲಾಸ್ಟಿಕ್ ಮಾರಾಟಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.
ಹೊರ ಜಿಲ್ಲೆಗಳಿಂದ ಲಾರಿಗಳಲ್ಲಿ ಪ್ಲಾಸ್ಟಿಕ್ ನಗರಕ್ಕೆ ಬರುತ್ತಿದ್ದು, ತಪಾಸಣೆ ನಡೆಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಳ್ಳಲು ಈಗಾಗಲೇ ಪೊಲೀಸ್ ಮತ್ತು ನಗರಸಭೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ನಗರಸಭೆ ಸದಸ್ಯ ಎ.ಸಿ. ಕುಮಾರಗೌಡ ಮಾತನಾಡಿ, ನಗರವನ್ನು ಕಸಮುಕ್ತ, ಪ್ಲಾಸ್ಟಿಕ್ ಮುಕ್ತವಾಗಿಸಬೇಕೆಂದು ನಗರಸಭೆಯಲ್ಲಿ ನಿರ್ಣಯ ಕೈಗೊಂಡಿz್ದೆÃವೆ. ಈ ನಿಟ್ಟಿನಲ್ಲಿ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ನಗರಸಭಾಧ್ಯಕ್ಷರು, ಆಯುಕ್ತರು ಸಿಬ್ಬಂದಿ ಜೊತೆಗೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಮಹಾವೀರ್ ಟ್ರೇಡಿಂಗ್ ಕಂಪನಿಗೆ ೫ ಸಾವಿರ ರೂ., ವರ್ಧಮಾನ್ ದಿನಸಿ ಅಂಗಡಿಗೆ ೨ ಸಾವಿರ ರೂ., ದೇವಿ ಪ್ಲಾಸ್ಟಿಕ್ ಅಂಗಡಿಗೆ ೩ ಸಾವಿರ ರೂ., ಪುಷ್ಪ ಪೇಪರ್ ಮಾರ್ಟ್ಗೆ ೫ ಸಾವಿರ ರೂ. ದಂಡ ವಿಧಿಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಎಚ್ಚರಿಕೆ ನೀಡಿz್ದÉÃವೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರರಾದ ತೇಜಸ್ವಿನಿ, ನಗರಸಭೆ ಸದಸ್ಯರಾದ ಸೈಯದ್ ಜಾವಿದ್, ಅಮೃತೇಶ್ ಚನ್ನಕೇಶವ, ಆರೋಗ್ಯ ನಿರೀಕ್ಷಕರಾದ ವೆಂಕಟೇಶ್ ಉಪಸ್ಥಿತರಿದ್ದರು.