

ಹಾಸನ: ಸ್ವಾತಂತ್ರ್ಯ ದಿನಾಚರಣೆ ನೆಪದಲ್ಲಿ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಅವಮಾನ ಮಾಡುವ ಘಟನೆಗಳು ಮರುಕಳಿಸುತ್ತಿದ್ದು ಅಂತಹ ಧ್ವಜಗಳ ಬಳಕೆ ನಿಷೇಧಿಸಬೇಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಾಗು ಹಿಂದೂ ಜನಜಾಗೃತಿ ಸಮಿತಿಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.
ಆ. 15 ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಕೆಲವರು ರಾಷಟ್ರೆಾಭಿಮಾನದ ಪ್ರತೀಕ ಎಂಬಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಬಳಸಿ ಆ ಬಳಿಕ ಎಲ್ಲೆಂದರಲ್ಲಿ ಎಸೆಯುತ್ತಾರೆ. ರಸ್ತೆ, ಚರಂಡಿ, ಸಾರ್ವಜನಿಕ ಪ್ರದೇಶಗಳಲ್ಲಿ ಎಸೆಯುವುದರಿಂದ ಅದರ ಘನತೆಯನ್ನು ಹಾಳು ಮಾಡಿದಂತಾಗುತ್ತದೆ. ಮುಖ್ಯವಾಗಿ ಶಾಲಾ ಕಾಲೇಜು ಮಕ್ಕಳು ಪ್ಲಾಸ್ಟಿಕ್ ಧ್ವಜ ಬಳಸದಂತೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ಸರ್ಕಾರದ ನಿರ್ಧಾರ ಖಂಡನೀಯ. ಕಾಂಗ್ರೆಸ್ ಸರ್ಕಾರಕ್ಕೆ ರಾಮನ ಹೆಸರು ಹೇಳುವುದು ಕಷ್ಟಗಿದೆ. ರಾಜಕೀಯ ಲಾಭದ ದೃಷ್ಟಿಯಿಂದ ಕೈಗೊಂಡಿರುವ ಹೆಸರು ಬದಲಾವಣೆ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು.
ಬೆಂಗಳೂರಿನ ರೈಲ್ವೆ ನಿಲ್ದಾಣದ ಪಾರ್ಸೆಲ್ ವಿಭಾಗದಲ್ಲಿ ಪತ್ತೆಯಾದ ಮಾಂಸ ಪ್ರಕರಣದಲ್ಲಿ ರಾಷ್ಟ್ರ ರಕ್ಷಣೆ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಎಸಿಪಿ ಚಂದನ್ ಕುಮಾರ್ ಅವರು ಹಿಂದೂ ಕಾರ್ಯಕರ್ತರ ವಿರುದ್ಧ ವಿನಾಕಾರಣ ದ್ವೆ?ಷ ಸಾಧಿಸುತ್ತಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ರಾಘವಾಚಾರ್, ಸೋಮು, ಗೋವಿಂದರಾಜು, ಅನಂತ್, ಸಂದೇಶ್ ಇತರರಿದ್ದರು.