ಫರಹತಾಬಾದ ಹಿರೇಸಾವಳಗಿ ಆಸ್ಪತ್ರೆ ತಲಾ 3.50 ಕೋಟಿ ವೆಚ್ಚದಲ್ಲಿ ಸಮುದಾಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ

Helth
Published on


ಕಲಬುರಗಿ: ಇಲ್ಲಿನ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ೭೦ ಕೋಟಿ ರೂ. ವೆಚ್ಚದಲ್ಲಿ ೨೦೦ ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ನಿರ್ಮಿಸಲಾಗುವುದು. ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ನೀಡಲು ಟ್ರಾಮಾ ಕೇರ್ ಸೆಂಟರ್  ಕಟ್ಟಡ ನಿರ್ಮಿಸಿದ್ದು, ಶೀಘ್ರವೇ  ಕಾರ್ಯಾಚರಣೆ ಆರಂಭಿಸಲಾಗುವುದು. ಕಲಬುರಗಿ ತಾಲೂಕಿನ ಫರಹತಾಬಾದ ಮತ್ತು ಹಿರೇಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ ೩.೫ ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸಲಾಗಿದೆ. ೧೦ ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಯನ್ನು ಉನ್ನತಿಕರಿಸಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net